anjalyjayakrishnan's picture
kannada raw data
32165da
Book_Chapter_Verse,Text
1TI_001_001,ನಮ್ಮ ರಕ್ಷಕನಾದ ದೇವರ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು
1TI_001_002,"ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ."
1TI_001_003,"ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,"
1TI_001_004,"ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ವಂಶಾವಳಿಗಳೂ ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ."
1TI_001_005,"ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ."
1TI_001_006,ಕೆಲವರು ಈ ಗುರಿಯನ್ನು ಬಿಟ್ಟು ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ.
1TI_001_007,"ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ."
1TI_001_008,ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು.
1TI_001_009,"ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು,"
1TI_001_010,"ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ."
1TI_001_011,ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.
1TI_001_12-13,"ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;"
1TI_001_014,ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.
1TI_001_015,"ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು."
1TI_001_016,"ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು."
1TI_001_017,"ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್."
1TI_001_018,"ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ."
1TI_001_019,"ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ."
1TI_001_020,ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
1TI_002_001,"ಎಲ್ಲಾದಕ್ಕಿಂತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ, ಪ್ರಾರ್ಥನೆಗಳನ್ನೂ, ಮನವಿಗಳನ್ನೂ, ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ."
1TI_002_002,"ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು."
1TI_002_003,"ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ."
1TI_002_004,ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.
1TI_002_005,"ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ."
1TI_002_006,ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.
1TI_002_007,"ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ."
1TI_002_008,"ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ."
1TI_002_009,"ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ"
1TI_002_010,ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
1TI_002_011,ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು.
1TI_002_012,ಉಪದೇಶಮಾಡುವುದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವುದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವುದಿಲ್ಲ. ಅವರು ಮೌನವಾಗಿರಬೇಕು.
1TI_002_013,"ಮೊದಲು ಸೃಷ್ಟಿಸಲ್ಪಟವನು ಆದಾಮನಲ್ಲವೇ, ಆಮೇಲೆ ಹವ್ವಳು."
1TI_002_014,"ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು."
1TI_002_015,"ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು."
1TI_003_001,ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.
1TI_003_002,"ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು."
1TI_003_003,"ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು."
1TI_003_004,"ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು."
1TI_003_005,ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?
1TI_003_006,"ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು."
1TI_003_007,"ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು."
1TI_003_008,"ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,"
1TI_003_009,ನಂಬಿಕೆಯಿಂದ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.
1TI_003_010,"ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ."
1TI_003_011,"ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು."
1TI_003_012,"ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು."
1TI_003_013,"ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ."
1TI_003_014,ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
1TI_003_015,"ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ."
1TI_003_016,"ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು."
1TI_004_001,"ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ."
1TI_004_002,"ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,"
1TI_004_003,"ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂದತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು."
1TI_004_004,"ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ."
1TI_004_005,ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ.
1TI_004_006,"ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ."
1TI_004_007,"ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ."
1TI_004_008,"ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು."
1TI_004_009,ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ.
1TI_004_010,"ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ."
1TI_004_011,ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
1TI_004_012,"ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು."
1TI_004_013,"ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು."
1TI_004_014,"ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ."
1TI_004_015,"ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು."
1TI_004_016,"ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ."
1TI_005_001,"ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ,"
1TI_005_002,"ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು."
1TI_005_3-4,ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
1TI_005_005,"ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು."
1TI_005_006,ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ.
1TI_005_007,ವಿಧವೆಯರು ನಿಂದೆಗೆ ಗುರಿಯಾಗದಂತೆ ಈ ವಿಷಯಗಳನ್ನು ಆಜ್ಞಾಪಿಸು.
1TI_005_008,"ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ."
1TI_005_009,"ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ,"
1TI_005_010,"ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ."
1TI_005_011,"ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು."
1TI_005_012,ಅಂಥವರು ತಾವು ಮೊದಲು ಮಾಡಿದ ಪ್ರತಿಜ್ಞೆಯನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗಿರುವರು.
1TI_005_013,"ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ."
1TI_005_014,ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.
1TI_005_015,ಇಷ್ಟರೊಳಗೆ ಕೆಲವರು ಅಡ್ಡದಾರಿ ಹಿಡಿದು ಸೈತಾನನನ್ನು ಹಿಂಬಾಲಿಸಿದ್ದಾರೆ.
1TI_005_016,ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
1TI_005_017,"ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು."
1TI_005_018,"“ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ."
1TI_005_019,ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ.
1TI_005_020,ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.
1TI_005_021,"ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ."
1TI_005_022,"ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ."
1TI_005_023,"ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ."
1TI_005_024,"ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ."
1TI_005_025,"ಹಾಗೆಯೇ ಕೆಲವು ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವು ಸತ್ಕ್ರಿಯೆಗಳು ಬೆಳಕಿಗೆ ಬಾರದ್ದಿದ್ದರೂ ಮರೆಯಾಗಿರಲಾರವು."
1TI_006_001,"ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ."
1TI_006_002,"ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು."
1TI_006_003,"ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,"
1TI_006_004,"ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ."
1TI_006_005,ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.
1TI_006_006,ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
1TI_006_007,"ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು."
1TI_006_008,"ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ."
1TI_006_009,"ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ."
1TI_006_010,"ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ."
1TI_006_011,"ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು."
1TI_006_012,"ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ."
1TI_006_013,"ಸರ್ವ ಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ, ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠ ಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದೇನಂದರೆ,"
1TI_006_014,ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ತನಕ ನೀನು ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಿಕೊಂಡಿರಬೇಕು.
1TI_006_015,"ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,"
1TI_006_016,"ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್."
1TI_006_017,"ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು."
1TI_006_18-19,"ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು."
1TI_006_020,"ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ."
1TI_006_021,ಕೆಲವರು ಆ ಸುಳ್ಳಾದ ಜ್ಞಾನವನ್ನು ಒಪ್ಪಿಕೊಂಡು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗಿ ಹೋದರು. ಕೃಪೆಯು ನಿಮ್ಮೊಂದಿಗಿರಲಿ.